ಅಗ್ರಸ್ಥಾನ. ಉಳಿದ ಅಷ್ಟ ಪದಗಳಲ್ಲಿ ಅಷ್ಟಕುಲ ಸಂಜಾತರಾದ ಅನಂತ, ಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ ಅವರ ಆವಾಹನೆ. ಆಶ್ಲೇಷಾ ಬಲಿ ಮಂಡಲದ ೫೨ ಪದಗಳು ಸರ್ಪಕುಲದ ೫೨ ಮಂದಿ ಸರ್ಪ ಶ್ರೇಷ್ಟರ ಆವಾಹನೆಗಾಗಿವೆ. ಸರ್ಪಗಳ ಪತ್ನಿಯರು, ಪುತ್ರರು, ಪುತ್ರಿಯರು, ಮೊಮ್ಮಕ್ಕಳು, ಮರಿ ಮಕ್ಕಳ ಸಹಿತ ಸರ್ಪ ಸಂಕುಲವನ್ನೂ ಇಂದ್ರಾದಿ ಅಷ್ಟದಿಕ್ಪಾಲಕರನ್ನೂ ದೇವಗಣಗಳನ್ನೂ ನಾಗಗಣಗಳನ್ನೂ ಅವಾಹಿಸಲಾಗುತ್ತದೆ.
ಆಶ್ಲೇಷಾ ಬಲಿ ವಿಧಾನದಂತೆ ಶ್ರೀ ವಾಸುಕೀ ನಾಗರಾಜನನ್ನೂ ಆತನ ಸರ್ಪ ಸಂಕುಲವನ್ನೂ ಧ್ಯಾನಿಸಲಾಗುತ್ತದೆ. ಅನಂತರ ಕಲ್ಪೋಕ್ತವಾಗಿ ಆಸನ, ಸ್ವಾಗತ, ಪಾದ್ಯ, ಅರ್ಘ್ಯ, ಆಚಮನೀಯ, ಮಧುಪರ್ಕ, ಆಚಮನ, ಸ್ನಾನ, ವಸನ, ಆಭರಣ, ಗಂಧ, ಪುಷ್ಪ, ಧೂಪ, ದೀಪ, ನೈವೇದ್ಯ, ವಂದನೆಗಳೆಂಬ ಷೋಡಶೋಪಚಾರ ಪೂಜೆಯನ್ನು ಸಲ್ಲಿಸಲಾಗುತ್ತದೆ. ಸಮಸ್ತ ಸರ್ಪಶಾಪ ಪರಿಹಾರಕ್ಕಾಗಿ ಕ್ಷೀರ, ಶರ್ಕರ, ಕದಳಿ, ಮಧು, ಆಜ್ಯ, ಹರಿದ್ರಾಯುಕ್ತ ಪಿಂಡಗಳನ್ನು ಸರ್ಪಗಳಿಗೆ ಮಂಡಲಗಳ ಪದಗಳಲ್ಲಿರಿಸಿ, ಸಮರ್ಪಿಸಲಾಗುತ್ತದೆ. ದೇವತೆಗಳಿಗೆ ಪ್ರಿಯವಾಗುವಂತೆ ಜ್ಯೋತಿಗಳನ್ನು ಬೆಳಗಿಸಿ ದೇದಿಪ್ಯವಾದ ವಾತಾವರಣವನ್ನು ನಿರ್ಮಿಸಲಾಗುತ್ತದೆ. ಮಹಾಮಂಗಳಾರತಿಯನ್ನು ಬೆಳಗಿ ಮಂತ್ರ ಪುಷ್ಪಾಂಜಲಿಯನ್ನು ಸಮರ್ಪಿಸಲಾಗುತ್ತದೆ. ಆನಂತರ ಪ್ರದಕ್ಷಿಣೆ ಗೈದು, ಸಾಷ್ಟಾಂಗ ನಮಸ್ಕಾರ ಮಾಡಿ, ನಾಗದೇವತೆಯನ್ನು ಪ್ರಸನ್ನಗೊಳಿಸಿ,ಮಹಾಮಹಿಮರಾದ ಸರ್ಪಗಳೇ, ಶ್ರದ್ಧಾ ಭಕ್ತಿಯಿಂದ ಯಥಾಶಕ್ತಿಯಾಗಿ ನಡೆಸಿದ ಈ ಪೂಜೆಯನ್ನು ಅಂಗೀಕರಿಸಿ, ಬಲಿದಾನವನ್ನು ಸ್ವೀಕರಿಸಿರಿ. ಸುಪ್ರೀತರಾಗಿರಿ, ಯಜಮಾನನಿಂದ, ಆತನ ಕುಟುಂಬದವರಿಂದ, ಪೂರ್ವಜರಿಂದ ನಿಮಗಾಗಿರ ಬಹುದಾದ ಸಕಲ ಹಾನಿಯನ್ನು, ಅಪಚಾರಗಳನ್ನು ಮನ್ನಿಸಿ, ಯಜಮಾನನನ್ನು, ಆತನ ಕುಟುಂಬವನ್ನು ಸಕಲ ದುರಿತಗಳಿಂದ ರಕ್ಷಿಸಿರಿ, ಅವರಿಗುಂಟಾಗಿರುವ ಸರ್ಪ ಶಾಪವನ್ನು ನಿವೃತ್ತಿ ಪಡಿಸಿ ಅನುಗ್ರಹಿಸಿರಿ. ಕುಷ್ಠಾದಿ ರೋಗಗಳನ್ನು ನಾಶಗೊಳಿಸಿರಿ. ಆಯುಷ್ಮಂತರಾದ ಪುತ್ರ ಪೌತ್ರರ ಉತ್ತಮ ಸಂತಾನ ಭಾಗ್ಯವನ್ನು ಅನುಗ್ರಹಿಸಿ ಉತ್ತರೋತ್ತರ ಅಭಿವೃದ್ಧಿಯಾಗುವಂತೆ ಆಶಿರ್ವದಿಸಿ, ಅಷ್ಟ್ಯೆಶ್ವರ್ಯಗಳನ್ನು ದಯಪಾಲಿಸುವ ಕೃಪೆ ಮಾಡಿರಿ ಇಂತು ಪ್ರಾರ್ಥನೆಯನ್ನು ಸಲ್ಲಿಸಲಾಗುತ್ತದೆ. ತದನಂತರ ಅರ್ಘ್ಯದಾನ, ಮತ್ತು ವಾಯನಗಳ ದಾನ ನೀಡಲಾಗುತ್ತದೆ. ಪ್ರಸಾದವನ್ನು ವಿತರಿಸಿ, ವಿಸರ್ಜನ ಪೂಜೆಯನ್ನು ನೆರವೇರಿಸಿ ಆಶ್ಲೇಷಾ ಬಲಿ ವಿಧಾನವನ್ನು ಪರಿಸಮಾಪ್ತಿಗೊಳಿಸಲಾಗುತ್ತದೆ.
ಅನಂತರ ಪೂಜೆಯನ್ನು ನೆರವೇರಿಸಿದ ಆಚಾರ್ಯರನ್ನು ಫಲ, ತಾಂಬೂಲ ಯಥಾಶಕ್ತಿ ದಕ್ಷಿಣೆ ನೀಡಿ ನಮಸ್ಕರಿಸಿ, ಆರ್ಶಿರ್ವಾದ ಪಡೆಯುವುದೊಂದಿಗೆ ಆಶ್ಲೇಷಾ ಬಲಿ ಪೂಜೆಯು ಮುಕ್ತಾಯವಾಗುತ್ತದೆ.
. 🙏