*ಮಹಾಶಿವರಾತ್ರಿಯ ಜಾಗರಣೆಯ ಮಹತ್ವ*
1. ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ. ಭೂ-ಸಂಚಾರ ಮಾಡುತ್ತಾನೆ. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಹೀಗಾಗಿ ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.
2. ಶಿವನನ್ನು ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ ಎಂಬ ಪ್ರತೀತಿ ಇದೆ. ಬೇಡರ ಕಣ್ಣಪ್ಪನು ಶಿವನನ್ನು ಪೂಜಿಸಿದ್ದರಿಂದ ಅವನನ್ನು ಅನುಗ್ರಹಿಸಿ ಮುಕ್ತಿ ಮಾರ್ಗ ತೋರಿಸಿದನು. ‘ ಸ್ಕಂದ ಪುರಾಣ ‘ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರಹ ನೀಡಿದ್ದಾನೆ. ‘ ಗರುಡ ಮತ್ತು ಅಗ್ನಿ ಪುರಾಣ ‘ ಗಳಲ್ಲಿ ಉಲ್ಲೇಖವಿರುವಂತೆ, ಬೇಡ ಸುಂದರ ಸೇನನಿಗೂ ಶಿವನು ಆಶೀರ್ವದಿಸಿದ್ದಾನೆ. ಹೀಗಾಗಿ ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ, ಬಿಲ್ವ ಪತ್ರೆಗಳನ್ನು ಅರ್ಪಿಸುವುದರಿಂದ ಎಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು.
3. ಕರುಣಾಮಯಿಯಾದ ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು ಅನುಗ್ರಹಿಸುತ್ತಾನೆ. ಹಿಂದು ಮುಂದು ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ. ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ ಸಲ ಸಂಕಟಕ್ಕೆ ಸಿಲುಕಿದ್ದೂ ಇದೆ. ಆದರೆ ಎಂಥದ್ದೇ ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ ಅನುಗ್ರಹಿಸುತ್ತಲೇ ಇರುತ್ತಾನೆ. ಅದಕ್ಕೆ “ಶಿವ ಭಕ್ತರಿಗೆ ನರಕ ಇಲ್ಲ” ಅನ್ನೋ ಮಾತಿದೆ.
4 . ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.
5 . ಶಿವರಾತ್ರಿಯ ಮತ್ತೊಂದು ವಿಶೇಷವೆಂದರೆ, ಶಿವನು ಪಾರ್ವತಿ ಹಿಮವಂತನ ಮಗಳಾದ ಗಿರಿಜೆಯನ್ನು ಅಂದರೆ ಪಾರ್ವತಿ ದೇವಿಯನ್ನು ವಿವಾಹವಾಗಿದ್ದು ಶಿವರಾತ್ರಿಯ ದಿನವೇ. ಪಾರ್ವತಿ ದೇವಿಯು ಶಿವರಾತ್ರಿಯ ಸಮಯದಲ್ಲಿ ಶಿವನನ್ನು ಪ್ರಾರ್ಥಿಸಿ. ಶಿವನ ಜಪ ಮಾಡಿ ಶಿವನನ್ನು ಒಲಿಸಿಕೊಂಡು ವಿವಾಹಳಾದಳು. ಅಷ್ಟೇ ಅಲ್ಲ, ಶಿವನು ಸಮುದ್ರ ಮಂಥನದಿಂದ ಉದ್ಭವಿಸಿದ ವಿಷವನ್ನು ಸೇವಿಸಿ, ಜಗತ್ತನ್ನು ವಿನಾಶದಿಂದ ಪಾರು ಮಾಡಿದ್ದು ಕೂಡ ಇದೇ ಸಮಯದಲ್ಲಿ. ಹೀಗೆ ಹಿಂದೂ ಪುರಾಣಗಳಲ್ಲಿ ಶಿವರಾತ್ರಿಗೆ ಮಹತ್ವದ ಹಿನ್ನೆಲೆ ಇದೆ.
*ಜಾಗರಣೆ, ಹಬ್ಬದ ವಿಶೇಷ ಆಚರಣೆ:*
ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ, ದೇಶ, ವಿದೇಶಗಳ ಶಿವದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ.
ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ವಾನ ಮಾಡಿ, ಶುಚಿರ್ಭೂತರಾಗಿ ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ನಡೆಸುತ್ತಾರೆ. ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ.
ಕೆಲವರು ಹಾಲು, ಹಣ್ಣು ಸೇವಿಸಿ ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ ವಿಶೇಷ.
ಅಭಿಷೇಕ ಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ, ತುಳಸಿ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ.
ಶಿವ ಪಂಚಾಕ್ಷರಿ ಮಂತ್ರ “ಓಂ ನಮ: ಶಿವಾಯ”, ಹರ ಹರ ಮಹಾದೇವ, ಶಂಭೋ ಶಂಕರ. ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ.
**ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ.*
ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ.
ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ.
ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.👏