ಿಷೇಕ ಎಂದು ಕರೆಯುವರು. ಮೊದಲಿಗೆ ಚಮಕದ ಮೂರನೆಯ ಭಾಗವನ್ನು ಉಚ್ಚರಿಸಿ, ನಂತರ ಒಂದು ನಮಕದ ಭಾಗವನ್ನೂ ನಂತರ ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ತದನಂತರ ಎರಡನೆಯ ನಮಕದ ಭಾಗವನ್ನೂ ಮತ್ತು ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು. ಹೀಗೆ ನಮಕಗಳ ಹನ್ನೊಂದೂ ಭಾಗವನ್ನು ಪಠಿಸಿ ಅಭಿಷೇಕ ಮಾಡುವರು. ಇದಕ್ಕೆ ಒಂದು ರುದ್ರವೆಂದು ಕರೆಯುವರು. ಬೆಳಗ್ಗೆ, ಸಂಜೆ ಮತ್ತು ರಾತ್ರೆ ಹೀಗೆ ೨೪ ಘಂಟೆಗಳು ಭಗವನ್ನಾಮಸ್ಮರಣೆ ಮಾಡುತ್ತಾ ಜಾಗರಣೆ ಮಾಡುವುದು ಪರಿಪಾಠ. ಅಂದು ಊಟ ಮಾಡದೆ ಅಲ್ಪಾಹಾರ ಸೇವನೆ ಮಾಡುವರು.
ಜಾಗರಣೆ, ಹಬ್ಬದ ವಿಶೇಷ ಆಚರಣೆ:
ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ, ದೇಶ, ವಿದೇಶಗಳ ಶಿವದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ.
ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ವಾನ ಮಾಡಿ, ಶುಚಿರ್ಭೂತರಾಗಿ ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ನಡೆಸುತ್ತಾರೆ. ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ. ಕೆಲವರು ಹಾಲು, ಹಣ್ಣು ಸೇವಿಸಿ ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ ವಿಶೇಷ.
ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ, ತುಳಸಿ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ ಪಂಚಾಕ್ಷರಿ ಮಂತ್ರ "ಓಂ ನಮ: ಶಿವಾಯ", ಹರ ಹರ ಮಹಾದೇವ, ಶಂಭೋ ಶಂಕರ...ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ. ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ. ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ. ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನುತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.
ಮಾಹಿತಿ ಕೃಪೆ - ಅಂತರ್ಜಾಲ